ಪುತ್ತೂರು: ಕಾಣಿಯೂರು ಸಮೀಪದ ಪುಂಚತ್ತಾರು ಎಂಬಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಯುವಕ ಕಿರುಕುಳ ನೀಡಿರುವುದಾಗಿ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಳು. ದೂರಿನ ಆಧಾರದಲ್ಲಿ ಸಿಸಿ ಟಿವಿ ಆಧರಿಸಿ ನಡೆಸಿದ ತನಿಖೆಯಲ್ಲಿ ಬೈಕ್ ನಂಬ್ರ ಪತ್ತೆಹಚ್ಚಲಾಗಿದ್ದು, ಅದರ ಮಾಲಕ ಪೆರ್ಲಂಪಾಡಿ ನಿವಾಸಿ ಉದಯ ಎಂಬಾತನನ್ನು ಸೆರೆ ಹಿಡಿಯಲಾಗಿದೆ. ಈತನೇ ಕಿರುಕುಳ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
