ಬಂದಡ್ಕ: ಬೇಡಡ್ಕ ಪಾಂಡಿಕಂಡದಲ್ಲಿ ಹೊಳೆಗೆ ಸ್ನಾನಕ್ಕಿಳಿದ ಯುವಕ ನಾಪತ್ತೆಯಾಗಿದ್ದು, ಇದುವರೆಗೂ ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಮೂನಾಡ್ ಮನ್ನಡ್ಕ ನಿವಾಸಿ ಮಾಧವನ್‌ರ ಪುತ್ರ ಅರ್ಜುನನ್ (26) ನೀರಿನಲ್ಲಿ ನಾಪತ್ತೆಯಾದ ಯುವಕ. ಗೆಳೆಯರ ಜೊತೆ ಪಯಸ್ವಿನಿ ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಸುಳಿಯಲ್ಲಿ ಸಿಲುಕಿ ಮುಳುಗಿರುವುದಾಗಿ ಶಂಕಿಸಲಾಗಿದೆ. ನಿನ್ನೆ ಮಧ್ಯಾಹ್ನ ಪಾಂಡಿಕಂಡಂ ರೆಗ್ಯುಲೇಟರ್ ಕಂ ಬ್ರಿಡ್ಜ್ ಸಮೀಪದಲ್ಲಿ ಘಟನೆ ನಡೆದಿದೆ.
ಮಾಹಿತಿ ತಿಳಿದು ಕುತ್ತಿಕ್ಕೋಲ್‌ನಿಂದ ಅಗ್ನಿಶಾಮಕ ದಳ ಹಾಗೂ ಕಾಸರಗೋಡಿನಿಂದ ಸ್ಕೂಬಾ ತಂಡ ತಲುಪಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಇಂದು ಬೆಳಿಗ್ಗಿನವರೆಗೆ ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಆದೂರು ಪೊಲೀಸರು ಸ್ಥಳಕ್ಕೆ ತಲುಪಿದ್ದಾರೆ.






