ಅಪ್ರಾಪ್ತರಿಂದ ವಾಹನ ಚಲಾವಣೆ: ತಪಾಸಣೆ ಬಿಗುಗೊಳಿಸಿದ ಮಂಜೇಶ್ವರ ಪೊಲೀಸರು

ಮಂಜೇಶ್ವರ: ಅಪ್ರಾಪ್ತರು ವಾಹನ ಚಲಾಯಿಸುತ್ತಿರುವುದು ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಿನಂಪ್ರತಿ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ವಾಹನ ತಪಾಸಣೆ ತೀವ್ರಗೊಳಿಸಿದ್ದಾರೆ. ಕಾರು, ದ್ವಿಚಕ್ರ ವಾಹನಗಳನ್ನು ಅಪ್ರಾಪ್ತರು ಚಲಾಯಿಸುತ್ತಿದ್ದು, ಪೊಲೀಸರ ಕೈಗೆ ಸಿಕ್ಕಿಬಿದ್ದಲ್ಲಿ ಆರ್.ಸಿ. ಮಾಲಕರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಲಾಗುತ್ತಿದೆ. ಮಂಜೇಶ್ವರ ಠಾಣೆ ವ್ಯಾಪ್ತಿಯಲ್ಲಿ ಪ್ರತೀ ತಿಂಗಳು ೫ರಿಂದ ೧೦ರಷ್ಟು ಈ ರೀತಿಯ ಪ್ರಕರಣಗಳು ದಾಖಲಾಗುತ್ತಿದೆಯೆಂದು ಪೊಲೀಸರು ತಿಳಿಸಿದ್ದಾರೆ.

ಮೊನ್ನೆ ರಾತ್ರಿ ಉಪ್ಪಳದಲ್ಲಿ 17ರ ಬಾಲಕ ದ್ವಿಚಕ್ರ ವಾಹನ ಚಲಾಯಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದು, ಆತನ ತಾಯಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಠಾಣೆ ಇನ್‌ಸ್ಪೆಕ್ಟರ್ ಕೆ. ರಾಜೀವ್ ಕುಮಾರ್‌ರ ನೇತೃತ್ವದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳ ನಿರ್ದೇಶನದಂತೆ ವಾಹನ ತಪಾಸಣೆಯನ್ನು ಬಿಗುಗೊಳಿಸಲಾಗಿದೆ.

You cannot copy contents of this page