ಆಟೋ ರಿಕ್ಷಾದಲ್ಲಿ ಸಾಗಿಸುತ್ತಿದ್ದ ೪೦ ಲೀಟರ್ ಕರ್ನಾಟಕ ಮದ್ಯ ವಶ: ಓರ್ವ ಸೆರೆ

ಕಾಸರಗೋಡು: ನಗರದ ನುಳ್ಳಿಪ್ಪಾಡಿಯಲ್ಲಿ ಅಬಕಾರಿ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ೪೦.೦೨ ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ.

ಇದಕ್ಕೆ ಸಂಬಂಧಿಸಿ  ನುಳ್ಳಿಪ್ಪಾಡಿಯ ಹರಿಪ್ರಸಾದ್ ಎನ್ ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಕಾಸರಗೋಡು ಎಕ್ಸೈಸ್ ಎನ್‌ಪೋರ್ಸ್‌ಮೆಂಟ್ ಆಂಡ್ ಆಂಟಿ ನಾರ್ಕೋಟಿಕ್ಸ್ ಸ್ಪೆಷಲ್ ಸ್ಕಾಡ್‌ನ  ಪ್ರಿವೆಂಟೀವ್ ಆಫೀಸರ್ ಸಾಜನ್  ಅಪ್ಯಾಳ್‌ರ ನೇತೃತ್ವದ ತಂಡ   ಕಾರ್ಯಾಚರಣೆ ನಡೆಸಿದೆ. ಈ ತಂಡದಲ್ಲಿ ಪ್ರಿವೆಂಟೀವ್ ಆಫೀಸರ್ (ಗ್ರೇಡ್) ನೌಶಾದ್ ಕೆ, ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಪ್ರಜಿತ್ ಕೆ.ಆರ್, ಬಾಬು ವಿ, ರಾಜೇಶ್ ಪಿ, ಮಂಜುನಾಥ ವಿ, ಮೈಮೋಳ್ ಜೋನ್ ಮತ್ತು ಚಾಲಕ ಕ್ರಿಸ್ಟಿನ್ ಪಿ ಎ ಎಂಬವರು ಒಳಗೊಂಡಿದ್ದರು.

You cannot copy contents of this page