ಇಚ್ಲಂಪಾಡಿ ಹಿರಿಯ ಬುನಾದಿ ಶಾಲೆಯಲ್ಲಿ ಸಂಸ್ಥಾಪಕರ ದಿನಾಚರಣೆ
ಕುಂಬಳೆ: ಇಚ್ಲಂಪಾಡಿ ಹಿರಿಯ ಬುನಾದಿ ಶಾಲೆಯಲ್ಲಿ ಸಂಸ್ಥಾಪಕರ ದಿನಾಚರಣೆ ನಿನ್ನೆ ನಡೆಯಿತು. ವ್ಯವಸ್ಥಾಪಕ ಎಂ. ಗಣೇಶ್ ರಾವ್ ಅಧ್ಯಕ್ಷತೆ ವಹಿಸಿದರು. ಕುಂಬಳೆ ಉಪಜಿಲ್ಲಾ ನಿವೃತ್ತ ವಿದ್ಯಾಧಿಕಾರಿ ಯತೀಶ್ ಕುಮಾರ್ ರೈ ಉದ್ಘಾಟಿಸಿದರು. ಪಂಚಾಯತ್ ಸದಸ್ಯೆ ಪುಷ್ಪಲತಾ ಶೆಟ್ಟಿ ಪ್ರತಿಭಾ ಪುರಸ್ಕಾರ ವಿತರಿಸಿದರು. ಎಲ್‌ಎಸ್‌ಎಸ್, ಯುಎಸ್‌ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಚ್. ಶಿವರಾಮ ಭಟ್, ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್, ಮಾತೃಸಂಘದ ಅಧ್ಯಕ್ಷೆ ಸುಧಾ ಟೀಚರ್, ಪಿಟಿಎ ಉಪಾಧ್ಯಕ್ಷ ಸುರೇಶ್ ಕೆಮ್ಮಣ್ಣು, ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ಅಧ್ಯಾಪಕ ವಿಶ್ವನಾಥ ಆಳ್ವ ಶುಭ ಹಾರೈಸಿದರು. ಮುಖ್ಯೋಪಾಧ್ಯಾಯ ಬಾಲಕೃಷ್ಣ ಆಚಾರ್ಯ ಪುತ್ತಿಗೆ ಸ್ವಾಗತಿಸಿ, ಪುಷ್ಪರಾಜ್ ಶೆಟ್ಟಿ ವಂದಿಸಿದರು. ಸುಕೇಶಿನಿ ಎ. ಪ್ರತಿಭಾ ಪುರಸ್ಕೃತರ ಮಾಹಿತಿ ನೀಡಿದರು. ಮೋಹನಚಂದ್ರ ಡಿ. ನಿರೂಪಿಸಿದರು.