ಎಂಡಿಎಂಎ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಸಜೆ, ಜುಲ್ಮಾನೆ
ಕಾಸರಗೋಡು: ಮಾರಕ ಮಾದಕ ದ್ರವ್ಯವಾದ ಎಂಡಿಎಂಎ ಮಾರಾಟ ಮಾಡಲೆತ್ನಿಸಿದ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (2)ದ ನ್ಯಾಯಾಧೀಶೆ ಪ್ರಿಯಾ ಕೆ. ಅವರು 10 ವರ್ಷ ಕಠಿಣ ಸಜೆ ಹಾಗೂ 1 ಲಕ್ಷ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ.
ಮುಳಿಯಾರು ಗ್ರಾಮದ ಪೊವ್ವಲ್ ಹೌಸ್‌ನ ನೌಶಾದ್ ಶೇಕ್(39) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಮೂರು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.
2021 ಮಾರ್ಚ್ 20ರಂದು ಸಂಜೆ 5.40ಕ್ಕೆ ಅಂದು ಕಾಸರಗೋಡು ಪೊಲೀಸ್ ಠಾಣೆ ಎಸ್‌ಐ ಆಗಿದ್ದ ಶಾಜು ಕೆ. ಇವರ ನೇತೃತ್ವದ ಪೊಲೀಸರು ಕಾಸರಗೋಡು ಪಿಲಿಕುಂಜೆ ಮಸೀದಿ ಬಳಿ ನಡೆಸಿದ ಕಾರ್ಯಾಚರಣೆಯಲ್ಲಿ ಕಾರಿನಲ್ಲಿ ಅಕ್ರಮವಾಗಿ ಮಾರಾಟಕ್ಕೆಂದು ಸಾಗಿಸುತ್ತಿದ್ದ 150 ಗ್ರಾಂ ಎಂಡಿಎಂಎ ವಶಪಡಿಸಿಕೊಂಡು ಆರೋಪಿ ನೌಶಾದ್ ಶೇಕ್‌ನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ಅಂದು ಕಾಸರಗೋಡು ಇನ್ಸ್‌ಪೆಕ್ಟರ್ ಆಗಿದ್ದ ಕೆ.ವಿ. ಬಾಬು ಈ ಪ್ರಕರಣದ ಮುಂದಿನ ತನಿಖೆ ನಡೆಸಿದ್ದರು. ಆ ಬಳಿಕ ಇನ್ಸ್ ಪೆಕ್ಟರ್ ಪಿ. ಅಜಿತ್ ಕುಮಾರ್ ಇದರ ಚಾರ್ಜ್‌ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಆರೋ ಪಿಗೆ ಶಿಕ್ಷೆ ವಿಧಿಸಲಾಗಿದೆ. ಪ್ರೋಸಿಕ್ಯೂ ಶನ್ ಪರ ಹೆಚ್ಚುವರಿ ಗವರ್ನಮೆಂಟ್ ಪ್ಲೀಡರ್ ಚಂದ್ರಮೋಹನ್ ಜಿ. ನ್ಯಾಯಾಲಯದಲ್ಲಿ ವಾದಿಸಿದ್ದರು.