ಎಂಡಿಎಂಎ ಸಹಿತ ಯುವಕ ಸೆರೆ

ಕಾಸರಗೋಡು: ನೀಲೇಶ್ವರದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಕೆ. ಪ್ರೇಮ್ ಸದನ್ ನೇತೃತ್ವದ ಪೊಲೀಸರ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಮಾದಕದ್ರವ್ಯವಾದ ೧.೩೭ ಗ್ರಾಂ ಎಂಡಿಎಂಎ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ಮೂಲತಃ ಪಡನ್ನಕ್ಕಾಡ್ ನಿವಾಸಿ, ಈಗ ನೀಲೇಶ್ವರ ಕಣಿಚ್ಚಿರದ ಕ್ವಾರ್ಟರ್ಸ್‌ವೊಂದರಲ್ಲಿ ವಾಸಿಸುತ್ತಿ ರುವ ಪಿ. ವಿಷ್ಣು (೨೭) ಎಂಬವರನ್ನು ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

You cannot copy contents of this page