ಕಟ್ಟಡದ ಮೇಲಿಂದ ಬಿದ್ದು ಗಾಯಗೊಂಡ ವ್ಯಕ್ತಿ ಮೃತ್ಯು

ಉಪ್ಪಳ: ಕೆಲಸ ವೇಳೆ ಕಟ್ಟಡದ ಮೇ ಲಿನಿಂದ ಬಿದ್ದು ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟರು. ಕಣ್ಣೂರು ಪಟ್ಟುವಂ ಚೆರುವ ಲ್‌ಕಾಡ್ ಎಂಬಲ್ಲಿನ ಮಿನಿಯಾ ಡನ್ ಜೋನ್ (೬೩) ಎಂಬಿವರು ಮೃತಪಟ್ಟ ವ್ಯಕ್ತಿ. ಮಾರ್ಚ್ ೨೨ರಂದು ಪಾವೂರಿನಲ್ಲಿ ಮೂರಂತಸ್ತಿನ ಕಟ್ಟಡದ ಮೇಲೆ ಪೈಪ್ ಅಳವಡಿಸುತ್ತಿದ್ದಾಗ ಜೋನ್ ಆಯ ತಪ್ಪಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಯಾಗದೆ ಮೊನ್ನೆ ರಾತ್ರಿ ಮೃತಪಟ್ಟರು. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಊರಿಗೆ ಕೊಂಡೊಯ್ಯಲಾ ಯಿತು. ಮೃತರು ಪತ್ನಿ, ಇಬ್ಬರು ಮಕ್ಕಳ ಸಹಿತ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

RELATED NEWS

You cannot copy contents of this page