ಕರ್ನಾಟಕ ಮದ್ಯ ವಶ: ಓರ್ವ ಸೆರೆ

ಕುಂಬಳೆ: ಕುಂಬಳೆ ಕೊಯಿಪ್ಪಾಡಿ ಕುಂಟಂಗೇರಡ್ಕದಲ್ಲಿ ಅಬಕಾರಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ 1.62 ಲೀಟರ್ ಕರ್ನಾಟಕ ಮದ್ಯ ಪತ್ತೆಹಚ್ಚಿ ವಶಪಡಿಸಲಾಗಿದೆ. ಇದಕ್ಕೆ ಸಂಬಂ ಧಿಸಿ ಕುಂಟಂಗೇರಡ್ಕದ ಉದಯ ನಾಯ್ಕ್ (53) ಎಂಬಾತನನ್ನು ಮಾಲು ಸಾಗಿಸಲು ಬಳಸಲಾದ ಸ್ಕೂಟರ್ ಸಹಿತ ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಕಾಸರಗೋಡು ರೇಂಜ್ ಎಕ್ಸೈಸ್ ಇನ್‌ಸ್ಪೆಕ್ಟರ್ ಜೋಸೆಫ್ ಜೆ ನೇತೃತ್ವದ ಅಬಕಾರಿ ತಂಡ ಈ ಕಾರ್ಯಾಚರಣೆ ನಡೆಸಿದೆ.

You cannot copy contents of this page