ಕಾರಿನಲ್ಲಿ 52 ಕಿಲೋ ಗಾಂಜಾ ಸಾಗಾಟ ಆರೋಪಿಗೆ 10 ವರ್ಷ ಸಜೆ, ಜುಲ್ಮಾನೆ

ಕಾಸರಗೋಡು: ಕಾರಿನೊಳಗೆ ಗುಪ್ತ ಸೆರೆ ನಿರ್ಮಿಸಿ ಅದರೊಳಗೆ 52 ಕಿಲೋ ಗಾಂಜಾ ಬಚ್ಚಿಟ್ಟು ಸಾಗಿಸಿದ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ದ್ವಿತೀಯ)ದ ನ್ಯಾಯಾಧೀಶೆ ಕೆ. ಪ್ರಿಯಾ ಅವರು ಹತ್ತು ವರ್ಷ ಕಠಿಣ ಸಜೆ ಹಾಗೂ ಒಂದು ಲಕ್ಷ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ.

ಕೋಟ್ಟಯಂ ಪೊನ್ ಕುನಂ, ಚಿರಂಗೆಡವು ಕಾನಾಪರಂಬಿಲ್‌ನ ಕೆ.ಎ. ನವಾಜ್ (44) ಎಂಬಾತ ನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಮೂರು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾ ಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.

2013 ಮೇ 13ರಂದು ರಾತ್ರಿ ಚೆಂಗಳ ಬೇವಿಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂದು ಕಾಸರಗೋಡು ಪೊಲೀಸ್ ಇನ್ಸ್‌ಪೆಕ್ಟರ್ ಆಗಿದ್ದು, ಈಗ ಡಿವೈಎಸ್‌ಪಿಯಾಗಿರುವ ಸಿ.ಕೆ. ಸುನಿಲ್ ಕುಮಾರ್‌ರ  ನೇತೃತ್ವದ ಪೊಲೀಸರ ತಂಡ ಆರೋಪಿ ಸಂಚರಿಸುತ್ತಿದ್ದ ಕಾರನ್ನು ತಡೆದು ನಿಲ್ಲಿಸಿ ತಪಾಸಣೆಗೊಳಪಡಿಸಿದಾಗ ಅದರಲ್ಲಿ ಗಾಂಜಾ ಪತ್ತೆಯಾಗಿತ್ತು. ಅದಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿ ಕೇಸು ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಆತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಪ್ರೋಸಿಕ್ಯೂಷನ್ ಪರ ಹೆಚ್ಚುವರಿ ಸರಕಾರಿ ಪ್ಲೀಡರ್ ಜಿ. ಚಂದ್ರಮೋಹನ್ ಮತ್ತು ನ್ಯಾಯವಾದಿ ಚಿತ್ರಕಲ ನ್ಯಾಯಾಲಯದಲ್ಲಿ ವಾದಿಸಿದ್ದರು.

RELATED NEWS

You cannot copy contents of this page