ಕಾರ್ಮಾರು ಕ್ಷೇತ್ರ ಬ್ರಹ್ಮಕಲಶೋತ್ಸವ ಸಮಿತಿ ರಚನೆ

ಬದಿಯಡ್ಕ: ಮಾನ್ಯ ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ ಈ ತಿಂಗಳ 6ರಂದು ನಡೆಯಲಿದೆ.  ಮಾರ್ಚ್ ಮೊದಲವಾರ ಇಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಸುತ್ತುಗೋಪುರ, ಪಾಕಶಾಲೆ, ರಾಜಗೋಪುರದ ಕೆಲಸ ನಡೆಯುತ್ತಿದೆ. ಈಗಾಗಲೇ ಶಿಲಾಮಯ ಗರ್ಭಗುಡಿ, ನಮಸ್ಕಾರಮಂಟಪ ಕೆಲಸ ಮುಗಿಸಲಾಗಿದೆ.

ಅಂದು ಬೆಳಿಗ್ಗೆ ೧೦ಕ್ಕೆ ನಡೆಯುವ ಸಭೆಯಲ್ಲಿ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡುವರು. ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿ ಉಪಸ್ಥಿತರಿರುವರು. ಉದ್ಯಮಿ ಬಿ. ವಸಂತ ಪೈ ಬದಿಯಡ್ಕ ಅಧ್ಯಕ್ಷತೆ ವಹಿಸುವರು. ಮುಂಡಪ್ಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಧ್ಯಕ್ಷ ಕೆ.ಕೆ. ಶೆಟ್ಟಿ ಉದ್ಘಾಟಿಸುವರು. ಗೋಪಾಲಕೃಷ್ಣ ಪೈ ಬದಿಯಡ್ಕ, ಗಂಗಾಧರ ನಾಯರ್ ಪಾಡಿ, ಮಧು ಸೂದನ ಆಯರ್ ಮಂಗಳೂರು, ಶಂಕರ ರೈ ಮಾಸ್ತರ್, ಡಾ| ನರೇಶ್ ರೈ ದೆಪ್ಪುಣಿಗುತ್ತು ಭಾಗವಹಿಸುವರು.

RELATED NEWS

You cannot copy contents of this page