ಕಾಸರಗೋಡು: ಕಾಸರಗೋಡು ಎಕ್ಸೈಸ್ ಎನ್ಫೋರ್ಸ್ಮೆಂಟ್ ಆಂಡ್ ಆಂಟಿ ನರ್ಕೋಟಿಕ್ಸ್ ಸ್ಪೆಷಲ್ ಸ್ಕ್ವಾಡ್ನ ಸರ್ಕಲ್ ಇನ್ಸ್ಪೆಕ್ಟರ್ ಶಂಕರ್ ಜಿ.ಎ. ಅವರ ನೇತೃತ್ವದ ತಂಡ ಕುಂಬಳೆ ರೈಲು ನಿಲ್ದಾಣ ಪರಿಸರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ೪.೯೧೮ ಗ್ರಾಂ ಎಂಡಿಎಂಎ ಮಾದಕ ದ್ರವ್ಯ ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಕುಂಬಳೆ ಕೊಪಾಡಿ ಮುಂಡಪಳ್ಳಂ ನಿವಾಸಿ ರೂಪೇಶ್ ಎಸ್. (೨೨) ಎಂಬಾತನನ್ನು ಬಂಧಿಸಲಾಗಿದೆ. ಆತನ ವಿರುದ್ಧ ಎಸ್ಡಿಪಿಎಸ್ ಕಾನೂನು ಪ್ರಕಾರ ಪ್ರಕರಣ ದಾಖಲಿಸಲಾಗಿದೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಈ ದಂಧೆಯಲ್ಲಿ ಇನ್ನೂ ಹಲವರು ಒಳಗೊಂಡಿರುವುದಾಗಿ ಬಂಧಿತನು ಹೇಳಿಕೆ ನೀಡಿದ್ದನೆಂದೂ, ಆದ್ದರಿಂದ ಆ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಅಬಕಾರಿ ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಪ್ರಿವೆಂಟಿವ್ ಆಫೀಸರ್ಗಳಾದ ಅಶ್ರಫ್ ಸಿ.ಕೆ, ಮುರಳಿ ಕೆ.ವಿ, ಸಿವಿಲ್ ಎಕ್ಸೈಸ್ ಆಫೀಸರ್ಗಳಾದ ಅಜಿತ್ ಸಿ, ಸತೀಶನ್ ಕೆ, ನಾಸರುದ್ದೀನ್ ಎಂ.ಕೆ, ಸೋನು ಸೆಬಾಸ್ಟಿಯನ್, ಸೈಬರ್ ಸೆಲ್ ಸಿವಿಲ್ ಎಕ್ಸೈಸ್ ಆಫೀಸರ್ ಪ್ರಿಷಿ ಪಿ.ಎಸ್ ಎಂಬವರು ಒಳಗೊಂಡಿದ್ದಾರೆ.






