ಕುಂಬಳೆಯಲ್ಲಿ ಬೀದಿನಾಯಿಗಳ ಉಪಟಳ ತಡೆಗೆ ಕ್ರಮ

ಕುಂಬಳೆ: ಕುಂಬಳೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕುಂಬಳೆ ಪೇಟೆ ಹಾಗೂ ಪರಿಸರ ಪ್ರದೇಶಗಳಲ್ಲಿ ಅಲೆದಾಡುತ್ತಿರುವ ಬೀದಿ ನಾಯಿ ಗಳನ್ನು ಹಿಡಿದು ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಇದು ನಾಗರಿಕರು ಹಾಗೂ ವ್ಯಾಪಾರಿಗಳಿಗೆ ನೆಮ್ಮದಿ ಮೂಡಿಸಿದೆ.

ಬೀದಿ ನಾಯಿಗಳ ಉಪಟಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಂಬಳ  ಪಂಚಾಯತ್ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಕ್ರಮ ಕೈಗೊಂಡಿದೆ. ಬೀದಿ ನಾಯಿಗಳ ಸಂಖ್ಯೆ ಹೆಚ್ಚುವುದನ್ನು ತಡೆಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮೂಲಕ ಸಾಧ್ಯವಿದೆಯೆಂದು ಅಧಿಕಾರಿಗಳು ತಿಳಿಸುತ್ತಿದ್ದಾರೆ.

ಬೀದಿ ನಾಯಿಗಳ ಉಪಟಳ ತೀವ್ರಗೊಂಡ ಪಂಚಾಯತ್‌ನ ಎಲ್ಲಾ ಸ್ಥಳಗಳಲ್ಲೂ ಈ ಕ್ರಮ ಕೈಗೊಳ್ಳ ಲಾಗುವುದೆಂದು  ಪಂಚಾಯತ್ ಅಧ್ಯ ಕ್ಷೆ ಯು.ಪಿ. ತಾಹಿರ, ಉಪಾಧ್ಯಕ್ಷ ನಾಸರ್ ಮೊಗ್ರಾಲ್ ತಿಳಿಸಿದ್ದಾರೆ. ಬೀದಿ ನಾಯಿಗಳ ಉಪಟಳಕ್ಕೆ ಶಾಶ್ವತ ಪರಿಹಾರ ಕಾಣಬೇಕೆಂದು ನಾಗರಿಕರು ಹಾಗೂ ವ್ಯಾಪಾರಿಗಳು ಒತ್ತಾಯಿಸಿ ದ್ದಾರೆ. ಜಿಲ್ಲಾ ಪಂಚಾಯತ್ ಹಾಗೂ ಮೃಗ ಸಂರಕ್ಷಣಾ ಇಲಾಖೆ ಜಿಲ್ಲೆಯಲ್ಲಿ ಆರಂಭಿಸಿರುವ ಎಬಿಸಿ (ಎನಿಮಲ್ ಬರ್ತ್ ಕಂಟ್ರೋಲ್) ಯೋಜನೆ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿ ಯಲ್ಲೂ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

RELATED NEWS

You cannot copy contents of this page