ಕೇರಳ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನಿತಿನ್ ಮಧುಕರ್ ಜಾಮ್ದಾರ್ ಅಧಿಕಾರ ಸ್ವೀಕಾರ
ತಿರುವನಂತಪುರ: ಕೇರಳ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಾಗಿ ನಿತಿನ್ ಮಧುಕರ್ ಜಾಮ್ದಾರ್ ನಿನ್ನೆ ರಾಜ್ಭವನದಲ್ಲಿ ನಡೆದ ಸಮಾರಂಭದಲ್ಲಿ ವಿದ್ಯುಕ್ತವಾಗಿ ಅಧಿಕಾರ ವಹಿಸಿಕೊಂಡರು. ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಪ್ರಮಾಣವಚನ ಬೋಧಿಸಿದರು. ಈ ವೇಳೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಹಲವು ಸಚಿವರು, ವಿಪಕ್ಷ ನಾಯಕ ವಿ.ಡಿ. ಸತೀಶನ್ ಸೇರಿದಂತೆ ಹೈಕೋರ್ಟ್ನ ವಿವಿಧ ನ್ಯಾಯಮೂರ್ತಿಗಳು ಭಾಗವಹಿಸಿದರು.