ಗಾಂಜಾ ಪ್ರಕರಣ: ಆರೋಪಿಗೆ 1 ವರ್ಷ ಸಜೆ, ಜುಲ್ಮಾನೆ

ಕಾಸರಗೋಡು: ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ ಗಾಂಜಾ ವಶಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಅದರ ಆರೋಪಿಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ದ್ವಿತೀಯ)ದ ನ್ಯಾಯಾಧೀಶರಾದ ಪ್ರಿಯಾ ಕೆ. ಅವರು 1 ವರ್ಷ ಕಠಿಣ ಸಜೆ ಹಾಗೂ 25,೦೦೦ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ.

ಕಲ್ಲಿಕೋಟೆ ರಾರೋತ್ ತಾಮರಶ್ಶೇರಿ ನಿವಾಸಿ ಮಾನವ್ ಪಿ. (24) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. 2೦೦೦ ಜುಲೈ 1೦ರಂದು ಬೆಳಿಗ್ಗೆ ಕೋಟಿಕುಳಂ ಎಂಬಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಆ ದಾರಿಯಾಗಿ ಬಂದ ರಿಜಿಸ್ಟ್ರೇಷನ್ ನಂಬ್ರ ಹೊಂದದ ಸ್ಕೂಟರನ್ನು ತಡೆದು  ನಿಲ್ಲಿಸಿ ತಪಾಸಣೆಗೊಳಪಡಿಸಿದಾಗ ಅದರಲ್ಲಿ ೨ ಕಿಲೋ ಗಾಂಜಾ ಪತ್ತೆಯಾಗಿತ್ತು. ಇದಕ್ಕೆ ಸಂಬಂಧಿಸಿ ಬೇಕಲ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಅಂದು ಬೇಕಲ ಎಸ್‌ಐ ಆಗಿದ್ದು, ಈಗ ಹೊಸದುರ್ಗ ಪೊಲೀಸ್ ಇನ್ಸ್‌ಪೆಕ್ಟರ್ ಆಗಿರುವ ಅಜಿತ್ ಕುಮಾರ್‌ರ ನೇತೃತ್ವದ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿ ಮಾಲು ವಶಪಡಿಸಿಕೊಂಡಿತ್ತು. ನಂತರ ಬೇಕಲ ಇನ್ಸ್‌ಪೆಕ್ಟರ್‌ಗಳಾದ ಪಿ. ನಾರಾಯಣನ್, ಸಿ. ನಿಝಾಮ್ ಎಸ್. ಮತ್ತು ಎಸ್‌ಐ ಜೋನ್ ಕೆ.ಎಂ. ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದರು. ಬೇಕಲ ಇನ್ಸ್‌ಪೆಕ್ಟರ್ ಆಗಿದ್ದ ಅನಿಲ್ ಕುಮಾರ್ ಎ. ನಂತರ ಈ ಪ್ರಕರಣದ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರೋಸಿಕ್ಯೂಷನ್ ಪರ ಹೆಚ್ಚುವರಿ ಸರಕಾರಿ ಪ್ಲೀಡರ್ ಚಂದ್ರಮೋಹನ್ ಜಿ. ಮತ್ತು ನ್ಯಾಯವಾದಿ ಚಿತ್ರಕಲಾ ನ್ಯಾಯಾಲಯದಲ್ಲಿ ವಾದಿಸಿದ್ದರು.

You cannot copy contents of this page