ಚಿಕಿತ್ಸೆ ಮಧ್ಯೆ ವೈದ್ಯ ಕಿರುಕುಳ ನೀಡಿರುವುದಾಗಿ ಯುವತಿ ದೂರು: ಕೇಸು ದಾಖಲು
ಕಾಸರಗೋಡು: ಚಿಕಿತ್ಸೆ ಮಧ್ಯೆ ವೈದ್ಯ ಕಿರುಕುಳ ನೀಡಿರುವುದಾಗಿ ಯುವತಿಯೋರ್ವೆ ಆರೋಪಿಸಿದ್ದಾಳೆ. ಕಾಸರಗೋಡು ಇರಿಯಾದಲ್ಲಿರುವ ಮೆಡಿಕಲ್ ಕ್ಲಿನಿಕ್‌ನ ವೈದ್ಯ ಜೋನ್ ವಿರುದ್ಧ ಯುವತಿ ದೂರು ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ವೈದ್ಯನ ವಿರುದ್ಧ ಅಂಬಲತ್ತರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಕಿಡ್ನಿ ಸಂಬಂಧ ಅಸೌಖ್ಯ ಬಾಧಿಸಿದ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡುತ್ತಿದ್ದ ವೇಳೆ ವೈದ್ಯ ಜೋನ್ ಲೈಂಗಿಕ ಕಿರುಕುಳ ನೀಡಿರುವುದಾಗಿ ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ವೀಡಿ ಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿ ಕಿರುಕುಳ ಮುಂದುವರಿಸಿರು ವುದಾಗಿಯೂ ದೂರಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕಾಸರಗೋಡು ಎಸ್ಪಿ ಸಹಿತ ಅಧಿಕಾರಿಗಳಿಗೆ ಯುವತಿ ದೂರು ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಅಂಬಲತ್ತರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.