ಜಮ್ಮು-ಕಾಶ್ಮೀರ ವಿಧಾನಸಭೆಗೆ ಮುಂದಿನ ತಿಂಗಳು ಚುನಾವಣೆ

ನವದೆಹಲಿ: ಕಳೆದ ಹಲವಾರು ವರ್ಷಗಳಿಂದ ಒಂದಲ್ಲ ಒಂದು ಕಾರಣಗಳಿಂದ ಮುಂದೂಡಲ್ಪಟ್ಟಿದ್ದ ಕಣಿವೆ ರಾಜ್ಯವಾದ ಜಮ್ಮು-ಕಾಶ್ಮೀರದಲ್ಲಿ ಮುಂದಿನ ತಿಂಗಳು ವಿಧಾನಸಭೆಗೆ  ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಜ್ಜಾಗಿದೆ.

 ಪ್ರಾಯೋಗಿಕವಾಗಿ ಕೇಂದ್ರ ಚುನಾವಣಾ ಆಯೋಗದ ಪೂರ್ಣ ತಂಡ ಇಂದು ಜಮ್ಮು-ಕಾಶ್ಮೀರಕ್ಕೆ ಸಂದರ್ಶಿಸಿದ್ದು, ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಪರಿಶೀಲನೆ ನಡೆಸಿ ಬಳಿಕ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಸಭ ನಡೆಸಿದ ಚುನಾವಣಾ ದಿನಾಂಕ ನಿಗದಿಪಡಿಸಲಿದೆ.

ಜಮ್ಮು-ಕಾಶ್ಮೀರದ ವಿಧಾನಸಭೆಗೆ ಸೆಪ್ಟಂಬರ್ 30ರೊಳಗಾಗಿ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಈಗಾಗಲೇ ನಿರ್ದೇಶ ನೀಡಿದೆ. ಆ  ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಭದ್ರತಾ ವ್ಯವಸ್ಥೆ ಕಾನೂನು ಮತ್ತು  ಸುವ್ಯವಸ್ಥೆ ಕುರಿತಂತೆ ಹಲವು ಸುತ್ತಿನ ಸಭೆ  ನಡೆಸಲು ಮುಂದಾಗಿದೆ.

ಮೂಲಗಳ ಪ್ರಕಾರ ಕಣಿವೆ ರಾಜ್ಯದಲ್ಲಿ ಒಟ್ಟು 5ರಿಂದ 6 ಹಂತಗಳಲ್ಲಾಗಿ ಚುನಾವಣೆ ನಡೆಯಲಿದೆ. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾರರು ಹೆಚ್ಚಿನ ಪ್ರಮಾಣದಲ್ಲಿ  ಹಾಗೂ ಸಕ್ರಿಯರಾಗಿ ಮತ ಚಲಾಯಿಸಿದ್ದರು. ಇದೇ ರೀತಿಯಲ್ಲಿ  ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಇನ್ನಷ್ಟು ಸಕ್ರಿಯವಾಗಿ ಪಾಲ್ಗೊಳ್ಳುವರೆಂಬ ನಿರೀಕ್ಷೆಯನ್ನು ಚುನಾವಣಾ ಆಯೋಗ ವ್ಯಕ್ತಪಡಿಸಿದೆ.

RELATED NEWS

You cannot copy contents of this page