ಜಿಲ್ಲಾ ಶಾಲಾ ಕಲೋತ್ಸವ ಕನ್ನಡಕ್ಕೆ ಅವಗಣನೆ- ಆರೋಪ

ಹೊಸದುರ್ಗ: ಉದಿನೂರಿ ನಲ್ಲಿ ನಡೆಯುತ್ತಿರುವ ಕಂದಾಯ ಜಿಲ್ಲಾ ಶಾಲಾ ಕಲೋತ್ಸವದಲ್ಲಿ ಕನ್ನಡವನ್ನು ಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಒಟ್ಟು 12 ವೇದಿಕೆಗಳಲ್ಲಿ ಕಾರ್ಯ ಕ್ರಮಗಳು ನಡೆಯುತ್ತಿದ್ದು, ಈ ಯಾವುದೇ ವೇದಿಕೆಯಲ್ಲಿ ಕನ್ನಡ ಭಾಷೆಯಲ್ಲಿ ನಾಮ ಫಲಕ ಸ್ಥಾಪಿಸಿಲ್ಲ. ಕನ್ನಡದ ಸ್ಪರ್ಧೆ ನಡೆಯುವ ಕೇವಲ ಒಂದೆಡೆ ಮಾತ್ರ ವೇದಿಕೆ ಸಮೀಪ ಪ್ಲಾಸ್ಟಿಕ್ ಮುಕ್ತ ಆವರಣವೇ ಉದಿನೂರಿಗೆ ಸ್ವರ್ಣಾಭರಣ ಎಂದು ಬರೆದಿಟ್ಟಿರುವುದು ಕಂಡು ಬಂದಿದೆ.

ಜಿಲ್ಲೆಯ ಒಟ್ಟು ಏಳು ಉಪಜಿಲ್ಲೆಗಳಿಂದ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಈ ಪೈಕಿ ಕಾಸರಗೋಡು, ಕುಂಬಳೆ, ಮಂಜೇಶ್ವರ ಉಪಜಿಲ್ಲೆಗಳಿಂದ ಭಾಗವಹಿಸುವ ವಿದ್ಯಾರ್ಥಿಗಳ ಪೈಕಿ ಬಹುಪಾಲು ಕನ್ನಡ ಮಕ್ಕಳೇ ಆಗಿದ್ದಾರೆ. ಹಾಗಿರುವಾಗ ಯಾವುದಾದರೂ ವೇದಿಕೆಗೆ ಕನ್ನಡ ಭಾಷೆಯಲ್ಲಿ ಹೆಸರಿಡಲು, ಅಥವಾ ಸೂಚನೆಗಳನ್ನು ಮಲೆಯಾಳದ ಜತೆಗೆ ಕನ್ನಡದಲ್ಲೂ ಬರೆಯಲು ಸಂಬಂಧಪಟ್ಟವರು ಆಸಕ್ತಿ ವಹಿಸಿಲ್ಲವೆಂಬ ಆರೋಪ ಕನ್ನಡ ಅಭಿಮಾನಿಗಳಿಂದ ಕೇಳಿ ಬಂದಿದೆ.

RELATED NEWS

You cannot copy contents of this page