ಬದಿಯಡ್ಕ: ಮಾನ್ಯ ಬಳಿಯ ಜೂಜಾಟ ಕೇಂದ್ರಕ್ಕೆ ಬದಿಯಡ್ಕ ಪೊಲೀಸರು ನಿನ್ನೆ ದಾಳಿ ನಡೆಸಿ ಅಲ್ಲಿ ಜೂಜಾಟದಲ್ಲಿ ನಿರತರಾಗಿದ್ದ ಏಳು ಮಂದಿಯ ಪೈಕಿ ಮೂವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ಮಾತ್ರವಲ್ಲ ಜುಗಾರಿ ಅಡ್ಡೆಯಿಂದ 5840 ರೂ. ನಗದು ವಶಪಡಿಸಿಕೊಂಡಿದ್ದಾರೆ. ನಾಲ್ವರು ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.