ಡಾ| ಮುರಲೀ ಮೋಹನ್ ಚೂಂತಾರುರಿಗೆ ರಾಷ್ಟ್ರಪತಿ ಪದಕ ಪ್ರದಾನ

ಮಂಜೇಶ್ವರ: ದಕ್ಷಿಣ ಕನ್ನಡ ಜಿಲ್ಲಾ ಗೃಹ ರಕ್ಷಕ ದಳದ ಸಮಾದೇಷ್ಟ ಡಾ| ಮುರಲೀಮೋಹನ್ ಚೂಂತಾರು ಅವರಿಗೆ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ ಪ್ರದಾನ ಮಾಡಲಾಯಿತು. ಬೆಂಗಳೂರಿನ ಪರೇಡ್ ಮೈದಾನದಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಅಗ್ನಿಶಾಮಕ ಮತ್ತು ಗೃಹ ರಕ್ಷಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಅವರಿಂದ ಶ್ಲಾಘನೆ ಪತ್ರ ಸ್ವೀಕರಿಸಿದರು. ಕಳೆದ ಒಂಭತ್ತೂವರೆ ವರ್ಷಗಳಿಂದ ದ.ಕ. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾಗಿ ಸೇವೆ ಸಲ್ಲಿಸುತ್ತಿರುವ ಡಾ| ಮುರಲೀಮೋಹನ್ ಚೂಂತಾರು ಬಾಯಿ, ಮುಖ ಮತ್ತು ದವಡೆ ಶಸ್ತ್ರ ಚಿಕಿತ್ಸಕರೂ ಆಗಿದ್ದಾರೆ. ಇವರು ಸಲ್ಲಿಸಿದ ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿಯವರ ಸೇವಾ ಪದಕ ನೀಡಲಾಯಿತು.

RELATED NEWS

You cannot copy contents of this page