ತಿರುವನಂತಪುರದಲ್ಲಿ ಬಿ. ವಸಂತ ಪೈಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ 27ರಂದು

ಕಾಸರಗೋಡು: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ  ಅಕಾಡೆಮಿಯ ಆಶ್ರಯದಲ್ಲಿ ತಿರುವನಂತಪುರದಲ್ಲಿ ಈ ತಿಂಗಳ ೨೭ರಂದು ನಡೆಯಲಿರುವ ಗಡಿನಾಡ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಉದ್ಯಮಿ, ಧಾರ್ಮಿಕ ಮುಂದಾಳು ಬಿ. ವಸಂತ ಪೈ ಬದಿಯಡ್ಕ ಇವರನ್ನು ಗೌರವಿಸಲಾಗುವುದು.

ತಿರುವನಂತಪುರದ ಭಾರತ್ ಸಭಾ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೇ ವೇಳೆ ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು ಸಾರುವ ಮೆರವಣಿಗೆ ಹಾಗೂ ಇತರ ಕಾರ್ಯಕ್ರಮ ನಡೆಯಲಿದೆ ಎಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಎನ್. ಚನಿಯಪ್ಪ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You cannot copy contents of this page