ಕಾಸರಗೋಡು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ತೀವ್ರ ಮಳೆಗೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಹಾಗೂ ಉಡುಪಿ ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಪುತ್ತೂರು, ಸುಳ್ಯ ತಾಲೂಕುಗಳಲ್ಲಿ ನಿನ್ನೆ ಧಾರಾಕಾರ ಮಳೆ ಸುರಿದಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ತೀವ್ರ ಗೊಂಡಿರುವುದರಿಂದ ಕಾಸರಗೋಡು ಜಿಲ್ಲೆಯ ಗಡಿ ಭಾಗದಲ್ಲಿ ಹರಿಯುವ ಹೊಳೆಗಳಲ್ಲಿ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆ ಉಂಟಾಗಿದೆ.







