ದೇಲಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ನಾಳೆಯಿಂದ

ಅಂಗಡಿಮೊಗರು: ದೇಲಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ನಾಳೆ ಆರಂಭಗೊಂಡು ಈ ತಿಂಗಳ 12ರವರೆಗೆ ವಿವಿಧ ಕಾರ್ಯ ಕ್ರಮಗಳೊಂದಿಗೆ ನಡೆಯಲಿದೆ. ನಾಳೆ ಬೆಳಿಗ್ಗೆ 8 ಗಂಟೆಗೆ ಉಗ್ರಾಣ ಮುಹೂರ್ತ ಬಳಿಕ ಮಲ್ಲ ಕ್ಷೇತ್ರದ ಆಡಳಿತ ಮೊಕ್ತೇಸರ ಆನೆಮಜಲು ಸತ್ಯನಾರಾಯಣ ಭಟ್‌ರಿಂದ ದೀಪ ಪ್ರಜ್ವಲನೆ, ಮದ್ಯಾಹ್ನ ಮಹಾಪೂಜೆ, ಸಂಜೆ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ವಿವಿಧ ವೈದಿಕ ಕಾರ್ಯಕ್ರಮಗಳ ಜೊತೆಗೆ ರಾತ್ರಿ ೭ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಜರಗಲಿದೆ.

You cannot copy contents of this page