ಮುಳಿಯಾರು: ಇರಿಯಣ್ಣಿ ನಿವಾಸಿ ನಿವೃತ್ತ ಪ್ರಾಂಶುಪಾಲ ಜಂಬೆ ಎಂ. ಮಹಾಲಿಂಗ ಭಟ್ (88) ನಿಧನ ಹೊಂದಿದರು. ಎಡನೀರು ಸ್ವಾಮೀಜೀಸ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಬಳಿಕ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದರು. ಇವರ ಪತ್ನಿ ರುಕ್ಮಿಣಿ ಈ ಹಿಂದೆ ನಿಧನ ಹೊಂದಿದ್ದಾರೆ. ಮೃತರು ಸಹೋದರ, ಸಹೋದರಿಯರು ಹಾಗೂ ಅಪಾರ ಶಿಷ್ಯ ವರ್ಗವನ್ನು ಅಗಲಿದ್ದಾರೆ.