ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ : ಪಿತನಿಗೆ 18 ವರ್ಷ ಸಜೆ

ಕಾಸರಗೋಡು: ಪ್ರಾಯಪೂರ್ತಿ ಯಾಗದ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯಾ ಗಿರುವ ತಂದೆಗೆ ಹೊಸದುರ್ಗ ವಿಶೇಷ ಕ್ಷಿಪ್ರ ನ್ಯಾಯಾಲಯ (ಪೋಕ್ಸೋ) 18 ವರ್ಷ ಕಠಿಣ ಸಜೆ ಹಾಗೂ 40,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದೆ. ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶದಲ್ಲಿ 16 ವರ್ಷದ ಪುತ್ರಿಗೆ ಕಳೆದ ವರ್ಷ ಹಲವು ಬಾರಿ  ಲೈಂಗಿಕ ಕಿರುಕುಳ ನೀಡಿದ ದೂರಿನಂತೆ ಆಕೆಯ ತಂದೆ ವಿರುದ್ಧ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದರು. ಆ ಪ್ರಕರಣದಲ್ಲಿ  ನ್ಯಾಯಾಲಯ ಆರೋಪಿ ತಂದೆಗೆ ಈ ಶಿಕ್ಷೆ ವಿಧಿಸಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ನಾಲ್ಕು ತಿಂಗಳ ಹೆಚ್ಚುವರಿ ಸಜೆ  ಅನುಭವಿಸ ಬೇಕಾಗಿದೆ ಯೆಂದೂ ತೀರ್ಪಿನಲ್ಲಿ ತಿಳಿಸಲಾಗಿದೆ. ಅಂದು ಹೊಸದುರ್ಗ ಪೊಲೀಸ್ ಠಾಣೆಯ ಎಸ್.ಐ ಆಗಿದ್ದ ಕೆ. ವೇಲಾಯುಧನ್ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

You cannot copy contents of this page