ಪೆರಿಯ ಅವಳಿ ಕೊಲೆ ಪ್ರಕರಣ: ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ
ಕೊಚ್ಚಿ: ಪೆರಿಯ ಕಲ್ಯೋಟ್‌ನ ಯೂತ್ ಕಾಂಗ್ರೆಸ್ ಕಾರ್ಯಕರ್ತರಾದ ಕೃಪೇಶ್ ಮತ್ತು ಶರತ್‌ಲಾಲ್ ಕೊಲೆ ಪ್ರಕರಣದಲ್ಲಿ ಕೊಚ್ಚಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ ತೀರ್ಪಿನಲ್ಲಿ ಶಿಕ್ಷೆಗೊಳಗಾದ ಸಿಪಿಎಂ ನೇತಾರ ಮಾಜಿ ಶಾಸಕ ಕೆ.ವಿ. ಕುಂಞಿ ರಾಮನ್ ಸೇರಿದಂತೆ ನಾಲ್ವರು ಆರೋಪಿಗಳು ಆ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಕೆ.ವಿ. ಕುಂಞಿರಾಮನ್‌ರ ಹೊರತಾಗಿ ಶಿಕ್ಷೆಗೊಳಗಾದ ಕಾಂಞಂಗಾಡ್ ಬ್ಲೋಕ್ ಪಂಚಾಯತ್ ಅಧ್ಯಕ್ಷ ಕೆ. ಮಣಿಕಂಠನ್, ರಾಘವನ್ ವೆಳುತ್ತೋಳಿ ಮತ್ತು ಕೆ.ವಿ. ಭಾಸ್ಕರನ್ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಕಲ್ಯೋಟ್ ಅವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಯಿಂದ ಬಿಡಿಸಿದ ಆರೋಪದಂತೆ ಈ ನಾಲ್ವರು ಆರೋಪಿಗಳಿಗೆ ಸಿಬಿಐ ನ್ಯಾಯಾಲಯ ತಲಾ ಐದು ವರ್ಷದಂತೆ ಸಜೆ ಹಾಗೂ ದಂಡ ವಿಧಿಸಿತ್ತು. ಈ ನಾಲ್ವರು ಈಗ ಕಣ್ಣೂರು ಸೆಂಟ್ರಲ್ ಜೈಲಿನಲ್ಲಿ ಕಳೆಯುತ್ತಿದ್ದಾರೆ.