ಬಲೆ ತುಳು ಓದುಗ ಅಭಿಯಾನ ನಾಳೆ
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ; ಬಲೆ ತುಳು ಓದುಗ’ ಅಭಿಯಾನದ 3ನೇ ಕಾರ್ಯಕ್ರಮ ನಾಳೆ ನಡೆಯಲಿದೆ.
ಮಂಗಳೂರು ರಥಬೀದಿಯ ಡಾ.ಪಿ.ದಯಾನಂದ ಪೈ- ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 40 ವಿದ್ಯಾರ್ಥಿಗಳು ಉರ್ವಾಸ್ಟೋರ್ ನಲ್ಲಿರುವ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ ನಡೆಸುವರು. ಕಾರ್ಯಕ್ರಮವನ್ನು ಬೆಳಿಗ್ಗೆ 10 ಗಂಟೆಗೆ ಸೆಂಟ್ರಲ್ ಬ್ಯೂರೋ ಆಫ್ ಕಮ್ಯೂನಿ ಕೇಶನ್ ಇಲಾಖೆಯ ಸಹಾಯಕ ನಿರ್ದೇಶಕ ಜಿತು ನಿಡ್ಲೆ ಉದ್ಘಾಟಿಸಿ, ಮಾತನಾಡುವರು. ಮುಖ್ಯ ಅತಿಥಿ ಯಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಆನಂದ ಶೆಟ್ಟಿ ಭಾಗವಹಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆ ಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿ ಕಾಡ್ ಅಧ್ಯಕ್ಷತೆ ವಹಿಸುವರು. ರಥ ಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇ ಜಿನ ಸಹ ಪ್ರಾಧ್ಯಾಪಕಿ ಡಾ. ಜ್ಯೋತಿ ಪ್ರಿಯಾ ಅತಿಥಿಯಾಗಿರುವರು.