ಬಸ್ ನಿಲ್ದಾಣದಲ್ಲಿ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
ಹೊಸದುರ್ಗ: ವ್ಯಕ್ತಿಯೊಬ್ಬರು ಬಸ್ ನಿಲ್ದಾಣದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತೆರುವತ್ತ್‌ನಲ್ಲಿ ವಾಸಿಸುವ ಎ. ಅಶೋಕನ್ (೬೫) ಮೃತ ವ್ಯಕ್ತಿ ವ್ಯಕ್ತಿಯಾಗಿದ್ದಾರೆ. ನಿನ್ನೆ ಬೆಳಿಗ್ಗೆ ಅಲಾಮಿಪಳ್ಳಿ ಬಸ್ ನಿಲ್ದಾಣ ಪರಿಸರ ದಲ್ಲಿ ಮೃತದೇಹ ಪತ್ತೆಯಾಗಿದೆ. ಜಿಲ್ಲಾಸ್ಪತ್ರೆಗೆ ತಲುಪಿಸಿದಾಗ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮೃತರು ಪತ್ನಿ ನಾರಾಯಣಿ, ಮಕ್ಕಳಾದ ನಯನ, ಮೀರ, ಅಳಿಯಂದಿರಾದ ಶಿಜು, ಶೈಜು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.