ಕಾಸರಗೋಡು: ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಎಂ.ಎಲ್. ಅಶ್ವಿನಿ ಅಧಿಕಾರ ವಹಿಸಿಕೊಂಡರು. ಪಕ್ಷದ ಜಿಲ್ಲಾ ಸಮಿತಿ ಸಭೆಯಲ್ಲಿ ನಿನ್ನೆ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಅಶ್ವಿನಿ ಪಕ್ಷದ ನಾಯಕತ್ವ ವಹಿಸಿಕೊಂಡರು. ಕಾರ್ಯಕ್ರಮವನ್ನು ಬಿಜೆಪಿ ರಾಜ್ಯ ವಕ್ತಾರ ನಾರಾಯಣನ್ ನಂಬೂದಿರಿ ಉದ್ಘಾಟಿಸಿದರು.
ಜಿಲ್ಲಾಧ್ಯಕ್ಷರಾಗಿದ್ದ ರವೀಶ ತಂತ್ರಿ ಕುಂಟಾರು, ನೇತಾರರಾದ ಎಸ್. ವೇಲಾಯುಧನ್, ಸಂಜೀವ ಶೆಟ್ಟಿ, ಕೆ. ಶ್ರೀಕಾಂತ್, ವಿಜಯ ರೈ ಮೊದಲಾದವರು ಉಪಸ್ಥಿತರಿದ್ದರು.