ಭಾರತೀಯ ಅಭಿಭಾಷಕ ಪರಿಷತ್‌ನಿಂದ  ರಾಷ್ಟ್ರೀಯ ಕಾನೂನು ದಿನಾಚರಣೆ

ಕಾಸರಗೋಡು:  ಭಾರತೀಯ ಅಭಿಭಾಷಕ ಪರಿಷತ್ ಜಿಲ್ಲಾ ಸಮಿತಿ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ದಿನಾಚರಣೆ ಆಯೋಜಿಸಲಾಯಿತು. ವಿದ್ಯಾನಗರ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ನಿವೃತ್ತ ಜಿಲ್ಲಾ ನ್ಯಾಯಾಧೀಶ ಎ. ಶಂಕರನ್ ನಾಯರ್ ಉದ್ಘಾಟಿಸಿದರು. ಕ್ರಿಮಿನಲ್ ಕಾನೂನಿನಲ್ಲಿ ತಿದ್ದುಪಡಿಗಳು ಎಂಬ ವಿ.ಷಯದಲ್ಲಿ ವಿಚಾರಗೋಷ್ಠಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಎ.ಸಿ. ಅಶೋಕ್ ಕುಮಾರ್ ಅಧ್ಯಕ್ಷತೆ ವಹಿಸಿದರು. ರಾಜ್ಯ ಉಪಾಧ್ಯಕ್ಷ ನ್ಯಾಯವಾದಿ ಬಿ. ರವೀಂದ್ರನ್, ರಾಜ್ಯ ಸಮಿತಿ ಸದಸ್ಯ ನ್ಯಾಯವಾದಿ ಕೆ. ಕರುಣಾಕರನ್ ನಂಬ್ಯಾರ್ ಮಾತನಾಡಿದರು. ಪರಿಷತ್‌ನ ಜಿಲ್ಲಾ ಕಾರ್ಯದರ್ಶಿ ನ್ಯಾಯವಾದಿ ಪಿ. ಮುರಳೀಧರನ್ ಸ್ವಾಗತಿಸಿ, ಹೊಸದುರ್ಗ ಘಟಕದ ಕೆ.ಜಿ. ಅನಿಲ್ ವಂದಿಸಿದರು.

RELATED NEWS

You cannot copy contents of this page