ಭೂಕುಸಿತ: ಹೊಳೆಗಳಲ್ಲಿ ಹೆಚ್ಚಿದ ನೀರಿನ ಪ್ರಮಾಣ

ಕಾಸರಗೋಡು: ಅತೀ ತೀವ್ರ ಮಳೆಯಿಂದಾಗಿ ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ಭೂಕುಸಿತ ಮುಂದುವರಿದಿದೆ. ಇದರ ಪರಿಣಾಮವಾಗಿ ಚೈತ್ರವಾಹಿನಿ, ತೇಜಸ್ವಿನಿ ಹೊಳೆಗಳಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ಕಾರ್ಯಂಗೋಡು ಹೊಳೆ ಹಾಗೂ ಸಮೀಪ ಪ್ರದೇಶಗಳಲ್ಲಿ ಹೊಳೆ ಉಕ್ಕಿ ಹರಿಯುತ್ತಿದೆ.  ಅರಣ್ಯಕ್ಕೆ ಹೊಂದಿಕೊಂಡಿರುವ ರಸ್ತೆಗಳಲ್ಲಿ ಸಂಚಾರ ಹೊರತುಪಡಿಸಬೇಕೆಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

RELATED NEWS

You cannot copy contents of this page