ಮಧೂರು ಬ್ರಹ್ಮಕಲಶೋತ್ಸವ ಸಮಿತಿ ಸಭೆ 2ರಂದು

ಮಧೂರು: ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಸಭೆ ಜೂನ್ 2 ರಂದು ಬೆಳಗ್ಗೆ 10 ಗಂಟೆಗೆ ಮಠಾಧಿಪತಿಗಳು, ಧಾರ್ಮಿಕ ನೇತಾರರು, ಮಲಬಾರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎಂ.ಆರ್.ಮುರಳಿ ಹಾಗು ಅಸಿಸ್ಟೆಂಟ್ ಕಮಿಷನರ್ ಪ್ರದೀಪ್ ಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ. ಸಭೆಯಲ್ಲಿ ಬ್ರಹ್ಮಕಲಶೋತ್ಸವದ ದಿನಾಂಕವನ್ನು ತೀರ್ಮಾನಿಸಲಾಗುವುದು. ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು, ನವೀಕರಣ ಸಮಿತಿ ಸದಸ್ಯರು ಹಾಗು ಊರ ಪರವೂರ ಭಕ್ತ ಜನರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಲಾಗಿದೆ.

RELATED NEWS

You cannot copy contents of this page