ಮಾರಾಟಕ್ಕಾಗಿ ಸಾಗಿಸುತ್ತಿದ್ದ ಗಾಂಜಾ ಸಹಿತ ಯುವಕ ಸೆರೆ
ಕಾಸರಗೋಡು: ಮಾರಾಟ ಕ್ಕೆಂದು ಸಾಗಿಸುತ್ತಿದ್ದ ಗಾಂಜಾ ಸಹಿತ ಯುವಕ ಸೆರೆಗೀಡಾಗಿದ್ದಾನೆ. ಮಾಂಙಾಡ್ ಆರ್ಯಡ್ಕ ನಿವಾಸಿ ಕಲಂದರ್ ಶಾಫಿ (32) ಎಂಬಾತನನ್ನು ಮೇಲ್ಪರಂಬ ಎಸ್ಐ ವಿ.ಕೆ. ಅನೀಶ್ ನೇತೃತ್ವದ ಪೊಲೀಸರು ಸೆರೆಹಿಡಿದಿದ್ದಾರೆ. ಈತನ ಕೈಯಿಂದ 46.44 ಗ್ರಾಂ ಗಾಂಜಾ ವಶಪಡಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ನಿನ್ನೆ ಸಂಜೆ ಕಳನಾಡು-ಚಟ್ಟಂಚಾಲ್ ರಸ್ತೆಯಲ್ಲಿ ನೀರಿನ ಟ್ಯಾಂಕ್ ಸಮೀಪದಿಂದ ಈತನನ್ನು ಬಂಧಿಸಲಾಗಿದೆ. ಸಂಶಯಾಸ್ಪದ ರೀತಿಯಲ್ಲಿ ಕಂಡುಬಂದ ಈತನ ದೇಹ ತಪಾಸಣೆ ನಡೆಸಿದಾಗ ಗಾಂಜಾ ಪತ್ತೆ ಯಾಗಿದೆ. ಆರೋಪಿಯ ಬಂಧನ ದಾಖಲಿಸಿ ಜಾಮೀನಿನಲ್ಲಿ ಬಿಡುಗಡೆ ಗೊಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.