ಯುವತಿ ಬಾವಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ

ಪೆರ್ಲ: ಯುವತಿಯೋರ್ವೆ ಬಾವಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಪೆರ್ಲ ಅಡ್ಕಸ್ಥಳ ಪಾಂಡಿಗಯದ ಯೋಗೇಶ್ ನಾಯ್ಕ ಎಂಬವರ ಪತ್ನಿ ದಿವ್ಯಾ (೨೮) ಸಾವನ್ನಪ್ಪಿದ ಯುವತಿ. ದಿವ್ಯಾ ನಿನ್ನೆ ಸಂಜೆ ಬಳಿಕ ನಾಪತ್ತೆಯಾಗಿದ್ದರು. ಮನೆಯವರು ಹುಡುಕಾಟ ನಡೆಸಿದಾಗ ಮನೆ ಪಕ್ಕದ ಆವರಣ ಇಲ್ಲದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಆ ಬಗ್ಗೆ ನೀಡಲಾದ ಮಾಹಿತಿ ಪ್ರಕಾರ ಕಾಸರಗೋಡು ಅಗ್ನಿಶಾಮಕ ದಳ ಆಗಮಿಸಿ ಮೃತದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ನಂತರ ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಯಿತು.

ಬದಿಯಡ್ಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಮೃತರು ಮಕ್ಕಳಾದ ಭಾರಧ್ವಾಜ್, ಖುಷಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

RELATED NEWS

You cannot copy contents of this page