ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಜೆ.ಎನ್-೧: ನಿನ್ನೆ ಮಾತ್ರ ೨೯೨ ಮಂದಿಯಲ್ಲಿ ಸೋಂಕು ಪತ್ತೆ; ಎರಡು ಸಾವು
ತಿರುವನಂತಪುರ: ಕೇರಳದಲ್ಲಿ ಕೊರೊನಾ ಉಪತಳಿ (ರೂಪಾಂತರ ವೈರಸ್ ಜೆ.ಎನ್-೧) ಸೋಂಕು ವ್ಯಾಪಕವಾಗಿ ಹರಡತೊಡಗಿದೆ. ನೆಗಡಿ, ಕೆಮ್ಮು, ಜ್ವರದಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರಸಲಹೆ ಪಡೆಯುವಂತೆ ಆರೋಗ್ಯ ಇಲಾಖೆ ತಿಳಿಸಿದೆ. ಇದಕ್ಕೆ ಹೊಂದಿಕೊಂಡು ರಾಜ್ಯದಲ್ಲಿ ಕೋವಿಡ್ ಟೆಸ್ಟಿಂಗ್ ಪ್ರಮಾಣವನ್ನು ಹೆಚ್ಚಿಸಲಾಗಿದೆ.
ಕೊರೊನಾ ವೈರಸ್ನ ಹೊಸ ತಳಿ ಜೆ.ಎನ್-೧ನ್ನು ಆರ್ಟಿಪಿಸಿಆರ್ ಮೂಲಕ ಪರೀಕ್ಷಿಸಿ ಸೋಂಕು ತಗಲಿದೆಯೇ ಎಂಬುವುದನ್ನು ಖಾತರಿಪಡಿಸಲಾಗುತ್ತಿದೆ. ರೂಪಾಂತರಿ ಜೆ.ಎನ್-೧ನ್ನು ವಿಶ್ವ ಆರೋಗ್ಯ ಸಂಸ್ಥೆ ಆಸಕ್ತಿಯ ರೂಪಾಂತರ ಎಂದು ವರ್ಗೀಕರಿಸಿದೆ. ಇದು ಸಾರ್ವಜನಿಕ ಆರೋಗ್ಯಕ್ಕೆ ಹೆಚ್ಚಿನ ಅಪಾಯ ಉಂಟುಮಾಡುವುದಿಲ್ಲವೆಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಜೆ.ಎನ್-೧ ಇನ್ನಷ್ಟು ಹರಡುತ್ತಿದ್ದು, ಕಳೆದ ೨೪ ತಾಸುಗಳೊಳಗೆ ಮಾತ್ರವಾಗಿ ೨೯೨ ಮಂದಿಯಲ್ಲಿ ಈ ಸೋಂಕು ತಗಲಿರುವುದನ್ನು ದೃಢೀಕರಿಸಲಾಗಿದೆ. ಇಬ್ಬರು ಸಾವನ್ನಪ್ಪಿದ್ದಾರೆ. ಇದರಿಂದ ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯಗೊಳಿಸಲಾಗಿದೆ. ರಾಜ್ಯದಲ್ಲಿ ಈತನಕ ಕೋವಿಡ್ ಸೋಂಕು ತಗಲಿದವರ ಒಟ್ಟು ಸಂಖ್ಯೆ ಈಗ ೨೦೫೧ಕ್ಕೇರಿದೆ.
ಭಾರತದಲ್ಲಿ ಅತೀ ಹೆಚ್ಚು ಕೋವಿಡ್ ಸೋಂಕು ತಪಾಸಣೆ ನಡೆಯುತ್ತಿರುವ ರಾಜ್ಯ ಕೇರಳವಾಗಿದೆ. ಇದರಿಂದಾಗಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿ ಪತ್ತೆಯಾಗುತ್ತಿದೆಯೆಂದು ಇದಕ್ಕೆ ರಾಜ್ಯ ಆರೋಗ್ಯ ಇಲಾಖೆ ಸ್ಪಷ್ಟೀಕರಣೆ ನೀಡಿದೆ. ಹೆಚ್ಚು ಪರೀಕ್ಷೆ ನಡೆಸಿದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಸಹಜವಾಗಿದೆ. ಆದರೆ ಈ ಬಗ್ಗೆ ಹೆಚ್ಚಿನ ಆತಂಕಪಡುವ ಅಗತ್ಯವಿಲ್ಲವೆಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.
ಕೋವಿಡ್ ಸೋಂಕು ಹೆಚ್ಚಾಗುತ್ತಿ ರುವ ಹಿನ್ನೆಲೆಯಲ್ಲಿ ಆ ಬಗ್ಗೆ ಚರ್ಚೆ ನಡೆಸಿ ಅಗತ್ಯದ ಮಾರ್ಗಸೂಚಿ ಮತ್ತ್ತು ಕೈಗೊಳ್ಳಬೇಕಾದ ಅಗತ್ಯದ ಕ್ರಮಗಳ ಬಗ್ಗೆ ಕೇಂದ್ರ ಆರೋಗ್ಯ ಸಚಿವರು ದಿಲ್ಲಿಯಲ್ಲಿ ಇಂದು ಎಲ್ಲಾ ರಾಜ್ಯಗಳ ಆರೋಗ್ಯ ಇಲಾಖೆಗಳ ಸಚಿವರುಗಳು ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಸಭ ಕರೆದಿದೆ. ಕೋವಿಡ್ ಸೋಂಕು ಹಿನ್ನೆಲೆ ಯಲ್ಲಿ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆರೋಗ್ಯ ತಪಾಸಣೆ ಏರ್ಪಡಿಸಲಾಗಿದೆ.