ರಾತ್ರಿ ಮರೆಯಲ್ಲಿ ಅಂಗಡಿಗೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ
ಕಾಸರಗೋಡು: ಮೊಗ್ರಾಲ್ ಪುತ್ತೂರಿಗೆ ಸಮೀಪದ ಕೊರುವೈಲ್ನಲ್ಲಿರುವ ನಿವೃತ್ತ ಬ್ಯಾಂಕ್ ಉದ್ಯೋಗಿ ಸೋಮನಾಥ ಎಂಬವರ ಅಂಗಡಿಗೆ ದ್ವಿಚಕ್ರ ವಾಹನದಲ್ಲಿ ಬಂದ ಅಕ್ರಮಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿರುವುದಾಗಿ ಕಾಸರಗೋಡು ಪೊಲೀಸರಿಗೆ ದೂರು ನೀಡಲಾಗಿದೆ.
ನಿನ್ನೆ ಮಧ್ಯರಾತ್ರಿ ಈ ಘಟನೆ ನಡೆದಿದೆ. ಕಲ್ಲು ತೂರಾಟದಿಂದ ಅಂಗಡಿಯ ಗಾಜು ಪುಡಿಗೈಯ್ಯಲ್ಪಟ್ಟಿದೆ. ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಕೆಲವು ತಿಂಗಳ ಮೊದಲು ಕೂಡಾ ಇದೇ ಪರಿಸರದ ಎರಡು ಮನೆಗಳಿಗೂ ಅಕ್ರಮಿಗಳು ಕಲ್ಲು ತೂರಾಟ ನಡೆಸಿದ್ದರು. ಅಂದೂ ಆ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು.
ಇದು ಸಮಾಜಘಾತಕರ ದುಷ್ಕೃತ್ಯವಾಗಿದೆಯೆಂದೂ ಆ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಕೇಳಿಕೊಳ್ಳಲಾಗಿದೆ.