ವ್ಯಾಪಾರಿಗೆ ಹಲ್ಲೆ ನಡೆಸಿ ಹಣ, ಮೊಬೈಲ್ ಎಗರಿಸಿದ ಪ್ರಕರಣ: ಆರೋಪಿ ಸೆರೆ

ಕಾಸರಗೋಡು: ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ಹಣ ಮತ್ತು ಮೊಬೈಲ್ ಫೋನ್ ಎಗರಿಸಿದ ಪ್ರಕರಣದ ಆರೋಪಿಯನ್ನು  ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ಕೂಡ್ಲು ಶಾಸ್ತಾನಗರದ ಅಮಾನ್ ಸಜಾದ್ (22) ಬಂಧಿತ ಆರೋಪಿ. ವಿದ್ಯಾನಗರದಲ್ಲಿ ಶವರ್ಮ ವ್ಯಾಪಾರ ನಡೆಸುತ್ತಿರುವ ಮೊಯ್ದೀನ್ ರಂಶೀದ್ ಎಂಬವರ ಮೇಲೆ ಎಪ್ರಿಲ್ 22ರಂದು ಹಲ್ಲೆ ನಡೆಸಿ 16,000 ರೂ. ನಗದು ಹಾಗೂ ಮೊಬೈಲ್ ಫೋನ್ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿ ಬಿ.ವಿ. ವಿಜಯ್ ಭರತ್ ರೆಡ್ಡಿಯವರ ಮೇಲ್ನೋಟದಲ್ಲಿ ಡಿವೈಎಸ್ಪಿ ಸಿ.ಕೆ. ಸುನಿಲ್ ಕುಮಾರ್, ಇನ್‌ಸ್ಪೆಕ್ಟರ್ ಪಿ. ನಳಿನಾಕ್ಷನ್ ನಿರ್ದೇಶನ ಪ್ರಕಾರ ಎಸ್.ಐ ಎನ್. ಅನ್ವರ್, ಇತರ ಪೊಲೀಸ್ ಸಿಬ್ಬಂದಿಗಳಾದ ಕೆ.ಎಂ. ಸುನಿಲ್ ಕುಮಾರ್ ಮತ್ತು ವೇಣುಗೋಪಾಲ್ ಎಂಬಿವರನ್ನೊಳಗೊಂಡ ತಂಡ ಆರೋಪಿಯನ್ನು ಬಂಧಿಸಿದೆ.

RELATED NEWS

You cannot copy contents of this page