ಶುದ್ಧಜಲ ಪೂರೈಕೆಯಲ್ಲಿ ವ್ಯತ್ಯಯ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಅಂಗವಾಗಿ ಕಾಸರಗೋಡು ನೀರು ಸರಬರಾಜು ಯೋಜನೆಯ ಮುಖ್ಯ ವಿತರಣಾ ಪೈಪ್‌ಲೈನ್ ಅನ್ನು ಬದಲಾಯಿಸುವ ಹಿನ್ನೆಲೆಯಲ್ಲಿ ಜನವರಿ 6, 7 ರಂದು ಕಾಸರಗೋಡು ಪುರಸಭೆ ಮತ್ತು ಮುಳಿಯಾರ್, ಚೆಂಗಳ, ಮಧೂರು, ಮೊಗ್ರಾಲ್ ಪುತ್ತೂರು ಪಂಚಾಯತ್‌ಗಳಲ್ಲಿ ನೀರು ಸರಬರಾಜು ವ್ಯತ್ಯಯವಾಗಲಿದೆ. ಗ್ರಾಹಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಮೂಲಕ ಜಲ ಪ್ರಾಧಿಕಾರದೊಂದಿಗೆ ಸಹಕರಿಸಬೇಕು ಎಂದು ಕೇರಳ ಜಲ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

You cannot copy contents of this page