ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ‘ಕೆಸರ್ ಕಂಡೊಡು ಕುಸಲ್ದ ಗೊಬ್ಬುಲು’

ಕುಂಬಳೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್  ಮಂಜೇಶ್ವರ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬೆಳ್ತಂಗಡಿ, ಕಿದೂರು ಶ್ರೀ ಮಹಾದೇವ ನವಜೀವನ ಸಮಿತಿ ಕಳತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಕೆಸರ್ ಕಂಡೊಡು ಕುಲಸ್ದ ಗೊಬ್ಬುಲು  ಕಾರ್ಯಕ್ರಮ ನಡೆಯಿತು. ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ ಕಾರ್ಯದರ್ಶಿ ವಿವೇಕ್ ವಿನ್ಸೆಂಟ್ ಪಾಯಸ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಅವರು ಪ್ರಶಂಸಿಸಿದರು.  ಮಂಜೇಶ್ವರ ತಾಲೂಕು ಜನಜಾಗೃತಿ ಅಧ್ಯಕ್ಷರ ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದರು. ದುಶ್ಚಟದಿಂದ ಮುಕ್ತಿ ಹೊಂದಿರುವ ಎಲ್ಲರೂ ಸಮಾಜಕ್ಕೆ ಒಳಿತು ಮಾಡುವ ಸಂಕಲ್ಪ ಮಾಡಬೇಕೆಂದು ಕರೆನೀಡಿದರು. ಯೋಜನೆಯ ಜಿಲ್ಲಾ ನಿರ್ದೇಶಕರು ಪ್ರವೀಣ್ ಕುಮಾರ್ ಕ್ರೀಡಾಕೂಟವನ್ನು ಉದ್ಘಾಟಿಸಿದರು. ತುಳು ಸಾಹಿತ್ಯ ಪರಿಷತ್ ಸದಸ್ಯ ಶ್ರೀನಿವಾಸ್ ಆಳ್ವ, ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಅಖಿಲೇಶ್ ನಗುಮುಗಂ, ಕುಂಬಳೆ ಪಂಚಾಯತ್ ಸದಸ್ಯೆ ಪುಷ್ಪಲತಾ, ರವಿರಾಜ್ ಮಾತನಾಡಿದರು. ನಿಕಟಪೂರ್ವ ಸದಸ್ಯರು ಸುಕೇಶ್ ಭಂಡಾರಿ ಉಪಸ್ಥಿತರಿದ್ದರು. ತಾಲೂಕು ಯೋಜನಾಧಿಕಾರಿ ಶಶಿಕಲಾ ಸುವರ್ಣ ಸ್ವಾಗತಿಸಿ, ಜನಜಾಗೃತಿ ವೇದಿಕೆ ಕಾಸರಗೋಡು ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಅಶ್ವತ್ಥ್ ಪೂಜಾರಿ ಲಾಲ್‌ಬಾಗ್ ವಂದಿಸಿದರು. ದೇವೀಪ್ರಸಾದ್ ಶೆಟ್ಟಿ ಬೆಜ್ಜ ನಿರೂಪಿಸಿದರು.

You cannot copy contents of this page