ಹಣಕಾಸು ಪ್ರಕರಣ: ೩೨ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಮಂಜೇಶ್ವರ; ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ೩೨ ವರ್ಷಗಳ ಬಳಿಕ ಪೊಲೀಸರು ಸೆರೆಹಿಡಿದಿದ್ದಾರೆ.
ಉಪ್ಪಳ ನಿವಾಸಿ ಇಕ್ಬಾಲ್ (೭೦) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತನನ್ನು ಈ ಹಿಂದೆ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪೊಲೀಸರು ಸೆರೆ ಹಿಡಿದಿದ್ದರು. ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡ ಈತ ತಲೆಮರೆಸಿಕೊಂಡಿದ್ದನು. ಪೊಲೀಸರು ಈತನಿಗೆ ತೀವ್ರ ಶೋಧ ನಡೆಸುತ್ತಿದ್ದರೂ ಈ ಮಧ್ಯೆ ಈತ ಮಲಪ್ಪುರಂನ ಎಡಕ್ಕರ ಎಂಬಲ್ಲಿರುವುದಾಗಿ ಮಾಹಿತಿ ಲಭಿಸಿದೆ. ಇದರಂತೆ ಅಲ್ಲಿಗೆ ತೆರಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.