ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು

ಹೊಸದುರ್ಗ: ನರ್ಸಿಂಗ್ ಕಾಲೇ ಜಿನ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಯತ್ನ ನಡೆಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ  ವಿದ್ಯಾರ್ಥಿನಿ ಮೃತಪಟ್ಟಳು. ಪಾಣ ತ್ತೂರು ನಿವಾಸಿ ಚೈತನ್ಯ (21) ಮೃತಪಟ್ಟ ವಿದ್ಯಾರ್ಥಿನಿ. ಈಕೆ ಶನಿವಾರ ಮಧ್ಯಾಹ್ನ ಕಲ್ಲಿಕೋಟೆ ಆಸ್ಪತ್ರೆಯಲ್ಲಿ ಕೊನೆಯು ಸಿರೆಳೆದಿದ್ದಾಳೆ. ಕಳೆದ ಡಿಸೆಂಬರ್ ೭ರಂದು ಕಾಞಂಗಾಡ್‌ನ ನರ್ಸಿಂಗ್ ಹಾಸ್ಟೆಲ್‌ವೊಂದರಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಳು.  ಹಾಸ್ಟೆಲ್ ವಾರ್ಡನ್ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಯತ್ನ ನಡೆಸಿದ್ದಾಳೆಂದು ಅಂದು ದೂರಲಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಈಕೆಯನ್ನು  ವಿವಿಧ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ವಿವಿಧ ವಿದ್ಯಾರ್ಥಿ ಸಂಘಟನೆಗಳು ಈ ಘಟನೆಯನ್ನು ಪ್ರತಿಭಟಿಸಿ ರಂಗಕ್ಕಿಳಿದಿದ್ದವು.

RELATED NEWS

You cannot copy contents of this page