ಹಾಸ್ಟೆಲ್‌ನೊಳಗೆ ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಕಾಸರಗೋಡು ಸರಕಾರಿ ಕಾಲೇಜಿನ ವಿದ್ಯಾರ್ಥಿ ಹಾಸ್ಟೆಲ್‌ನೊಳಗೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪಾಣತ್ತೂರು ಕನೀತ್ತೋಡು ನಿವಾಸಿ ದಿನೇಶನ್  ಎಂಬವರ ಪುತ್ರ ಕಾಸರಗೋಡು ಸರಕಾರಿ ಕಾಲೇಜಿನ ಪ್ರಥಮ ವರ್ಷ ಬಿಎಸ್ಸಿ (ಪ್ರಾಣಿಶಾಸ್ತ್ರ) ವಿದ್ಯಾರ್ಥಿ ಅಭಿಷೇಕ್ ಪಿ.ಡಿ (20) ಸಾವನ್ನಪ್ಪಿದ ವಿದ್ಯಾರ್ಥಿ. ಈತ ವಿದ್ಯಾನಗರದಲ್ಲಿರುವ ಸರಕಾರಿ ಪೋಸ್ಟ್ ಮೆಟ್ರಿಕ್ ಹಾಸ್ಟೆಲ್‌ನಲ್ಲಿ ವಾಸಿಸಿ ಕಾಲೇಜಿಗೆ ಹೋಗುತ್ತಿದ್ದನು. ಇದೇ ಹಾಸ್ಟೆಲ್‌ನಲ್ಲಿ ಈತ ನಿನ್ನೆ ರಾತ್ರಿ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ವಿಷಯ ತಿಳಿದ ಕಾಸರಗೋಡು ಪೊಲೀಸರು ಹಾಸ್ಟೆಲ್‌ಗೆ ಆಗಮಿಸಿ ಮೃತದೇಹದ ಮಹಜರು ನಡೆಸಿದ ನಂತರ ಮರಣೋತ್ತರ ಪರೀಕ್ಷೆಗಾಗಿ ಜನರಲ್ ಆಸ್ಪತ್ರೆಗೆ ಸಾಗಿಸಿದರು. ಸಾವಿನ ಹಿನ್ನೆಲೆ ಬಗ್ಗೆ ಪೊಲೀಸರು ಸಮಗ್ರ ತನಿಖೆ ಆರಂಭಿಸಿದ್ದಾರೆ. ಮೃತನು ತಾಯಿ ಸಿಂಧು, ಸಹೋದರಿ ಅವಂತಿಕ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾನೆ.

RELATED NEWS

You cannot copy contents of this page