೫೩೫ ಪ್ಯಾಕೆಟ್ ತಂಬಾಕು ಉತ್ಪನ್ನ ವಶ

ಕಾಸರಗೋಡು: ಚೆರ್ಕಳದಲ್ಲಿ ವಿದ್ಯಾನಗರ ಪೊಲೀಸ್ ಇನ್ಸ್ ಪೆಕ್ಟರ್ ಪ್ರಮೋದ್‌ರ ನೇತೃತ್ವದ ಪೊಲೀಸರು ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳ ದಲ್ಲಿ ನಿಷೇಧ ಹೇರಲಾಗಿರುವ ೫೩೫ ಪ್ಯಾಕೆಟ್ ತಂಬಾಕು ಉತ್ಪ ನ್ನಗಳನ್ನು ಪತ್ತೆಹಚ್ಚಿ ವಶಪಡಿಸಿ ಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ಬೇರ್ಕದ ಹಮೀದ್ (೫೧) ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

You cannot copy contents of this page